
ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇಂದು ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದೆ.
ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಸೇರಿದಂತೆ ಪ್ರಮುಖ ನಾಯಕರ ನೇತೃತ್ವದಲ್ಲಿ ಮೂರು ತಂಡಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಪ್ರತಿ ಕ್ಷೇತ್ರದಿಂದ 200 ಕಾರ್ಯಕರ್ತರನ್ನು ಕರೆತರಲು ಸೂಚನೆ ನೀಡಲಾಗಿದೆ.
ಕಳೆದ ಒಂದು ವಾರದಿಂದ ಸದನದ ಒಳಗೆ ಮತ್ತು ಹೊರಗೆ ಗದ್ದಲ ಸೃಷ್ಟಿಸಿರುವ ಬಿಜೆಪಿ, ಜೆಡಿಎಸ್ ಬೆಂಬಲದೊಂದಿಗೆ ಇಂದು ತನ್ನ ಹೋರಾಟವನ್ನು ನಿರ್ಣಾಯಕ ಹಂತಕ್ಕೆ ಕೊಂಡೊಯ್ಯಲು ಸಜ್ಜಾಗಿದೆ.