
ಮಧ್ಯಪ್ರದೇಶದ ಗುನಾ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿಯ ಬಾಲಕನೊಬ್ಬ ಸಹಪಾಠಿ ಬಾಲಕಿಯರ ನೀರಿನ ಬಾಟಲಿಯಲ್ಲಿ ಮೂತ್ರ ಬೆರೆಸಿ ಕುಡಿಸಿದ ಘಟನೆ ಸೋಮವಾರ ನಡೆದಿದೆ.
ದೂರು ನೀಡಿದ ಬಾಲಕಿಯರಿಗೆ ಮುಖ್ಯೋಪಾಧ್ಯಾಯರು ಚಾಕೊಲೇಟ್ ತಿಂದು ಸರಿಪಡಿಸಿಕೊಳ್ಳಿ ಎಂದು ನಿರ್ಲಕ್ಷ್ಯದಿಂದ ಉತ್ತರಿಸಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ.
ಜಿಲ್ಲಾಧಿಕಾರಿ ಕಿಶೋರ್ ಕುಮಾರ್ ಕನ್ಯಾಲ್ ಅವರು ಪ್ರಾಂಶುಪಾಲರಿಗೆ ನೋಟಿಸ್ ಜಾರಿ ಮಾಡಿದ್ದು, ಶಿಕ್ಷಣ ಇಲಾಖೆಯು 2 ದಿನಗಳಲ್ಲಿ ತನಿಖಾ ವರದಿ ಸಲ್ಲಿಸಲು ಆದೇಶಿಸಿದೆ.