
ರಾಜ್ಯದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, ಈ ಕುರಿತಾದ ಸಂಪೂರ್ಣ ವರದಿಯನ್ನು ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಪ್ರತಿ ಜಿಲ್ಲೆಗೆ ಒಬ್ಬ ಸಚಿವರನ್ನು ನೇಮಕ ಮಾಡಲಾಗಿದ್ದು, ಅವರು ಜಿಲ್ಲೆಯ ಅಭಿವೃದ್ಧಿ ಕೆಲಸಗಳ ಜೊತೆಗೆ ಪಕ್ಷದ ಸಂಘಟನೆಯ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಸೂಚಿಸಲಾಗಿದೆ.
ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಬೇಡಿಕೆಗಳ ಮನವಿ ಪತ್ರವನ್ನು ಸ್ವೀಕರಿಸಿದ ಸಚಿವರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.