
ನೇಪಾಳದಲ್ಲಿ ಪ್ರವಾಹದ ನೀರಿನಲ್ಲಿ ಕೊಚ್ಚಿಬಂದ ಚಿನ್ನ, ಬೆಳ್ಳಿ ಮತ್ತು ನಗದು ವಸ್ತುಗಳನ್ನು ತಮ್ಮ ಬಳಿ ಇಟ್ಟುಕೊಳ್ಳುವುದು ಕಾನೂನುಬಾಹಿರ ಎಂದು ನೇಪಾಳ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಧಾಡಿಂಗ್ ಜಿಲ್ಲೆಯಲ್ಲಿ ಪ್ರವಾಹದಲ್ಲಿ ಸಿಕ್ಕ ಬ್ಯಾಂಕ್ ಲಾಕರ್ ಒಡೆದು ಹಣ ದೋಚಿದ ಆರೋಪದಲ್ಲಿ 29 ಜನರನ್ನು ಬಂಧಿಸಿದ ನಂತರ ಪೊಲೀಸರು ಈ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಬುಧಿಗಂಡಕಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.