
ರಣ್‌ಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ಅಭಿನಯದ ನಮಿತ್ ಮಲ್ಹೋತ್ರಾ ನಿರ್ಮಾಣದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಇಂಗ್ಲಿಷ್ ಆವೃತ್ತಿಯು ಹಿಂದಿ ಆವೃತ್ತಿಗಿಂತ ಸುಮಾರು 30 ನಿಮಿಷಗಳಷ್ಟು ಕಡಿಮೆ ಅವಧಿಯನ್ನು ಹೊಂದಿರಲಿದೆ.
ಅಂತರಾಷ್ಟ್ರೀಯ ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ರೂಪಿಸಲಾಗಿರುವ ಇಂಗ್ಲಿಷ್ ಆವೃತ್ತಿಯಲ್ಲಿ ಯಾವುದೇ ಹಾಡುಗಳಿರುವುದಿಲ್ಲ ಹಾಗೂ ಕೆಲವು ಸಂಭಾಷಣೆ ಮತ್ತು ದೃಶ್ಯಗಳನ್ನು ಕಟ್ ಮಾಡಲಾಗಿದೆ.
ಎ.ಆರ್. ರೆಹಮಾನ್ ಮತ್ತು ಹಾನ್ಸ್ ಜೀಮರ್ ಸಂಗೀತ ನೀಡಿರುವ ಈ ಚಿತ್ರದ ಮೊದಲ ಭಾಗವು ಈ ವರ್ಷದ ನವೆಂಬರ್‌ನಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗಲಿದೆ.