
ಬೆಂಗಳೂರಿನ ಯುಬಿ ಸಿಟಿಯಲ್ಲಿರುವ ಐದು ಪ್ರತಿಷ್ಠಿತ ಹೋಟೆಲ್ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಕೊಳೆತ ಮಾಂಸ ಮತ್ತು ಅವಧಿ ಮೀರಿದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
ಸ್ಕೈ ಹೋಟೆಲ್ನಲ್ಲಿ 45 ಕೆಜಿ ಕೊಳೆತ ಮಾಂಸ ಮತ್ತು 15 ಲೀಟರ್ ಬಳಸಿದ ಎಣ್ಣೆ ಸೇರಿದಂತೆ ಒಟ್ಟು 51 ಕೆಜಿ ಆಹಾರ ಪದಾರ್ಥಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ರಾಯಲ್ ಚೈನ್ ಹೋಟೆಲ್ನಲ್ಲಿ 55 ಕೆಜಿ ಮಾಂಸ ಪತ್ತೆಯಾಗಿದ್ದು, ಆಹಾರ ಸುರಕ್ಷತಾ ನಿಯಮ ಉಲ್ಲಂಘಿಸಿದ ಹೋಟೆಲ್ಗಳ ಅಡುಗೆಮನೆಗೆ ಅಧಿಕಾರಿಗಳು ಬೀಗ ಹಾಕಿ ಸೀಲ್ ಮಾಡಿದ್ದಾರೆ.