
ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಶಾಸಕರು ಕಪ್ಪು ಟೀ-ಶರ್ಟ್ ಧರಿಸಿ ಶಾಸಕರ ಭವನದ ಬಳಿ ಇರುವ ವಾಲ್ಮೀಕಿ ಪ್ರತಿಮೆ ಬಳಿ ಈ ಪ್ರತಿಭಟನೆ ಹಮ್ಮಿಕೊಂಡಿದ್ದರು.
ಪ್ರತಿಭಟನಾಕಾರರು ಧರಿಸಿದ್ದ ಟೀ-ಶರ್ಟ್ ಮೇಲೆ ನಾಗೇಂದ್ರ ರಾಜೀನಾಮೆ ನೀಡಲಿ ಎಂಬ ಬರಹಗಳ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.