
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಕೆಆರ್ಎಸ್ ಬೃಂದಾವನದಲ್ಲಿ ಇಂದಿನಿಂದ ಭವ್ಯ ಕಾವೇರಿ ಆರತಿ ಕಾರ್ಯಕ್ರಮ ಆರಂಭವಾಗಲಿದೆ.
ಈ ಕಾರ್ಯಕ್ರಮವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ 6 ಗಂಟೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ಜಲಸಂಪನ್ಮೂಲ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ ಆರತಿ ಅಕ್ಟೋಬರ್ 21ರವರೆಗೆ ಪ್ರತಿದಿನ ನಡೆಯಲಿದೆ.