
ಹುಬ್ಬಳ್ಳಿಯಲ್ಲಿ ಗಾಂಜಾ ಸಾಗಾಟ ಮತ್ತು ಅಕ್ರಮ ಮಾರಾಟ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಅಪರಾಧಿಗಳಿಗೆ ಧಾರವಾಡ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಅಪರಾಧಿಗಳಾದ ಶಿವರಾಜ ಮತ್ತು ಬಸವರಾಜ ಅವರಿಗೆ ತಲಾ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹25,000 ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
2023ರ ಏಪ್ರಿಲ್ 9ರಂದು ಹಳೇ ಹುಬ್ಬಳ್ಳಿಯಲ್ಲಿ ಆಟೊದಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಪೊಲೀಸರು ₹11,500 ಮೌಲ್ಯದ 1,154 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದರು.