
ಗೃಹಲಕ್ಷ್ಮಿ ಯೋಜನೆಯ 34, 35 ಮತ್ತು 36ನೇ ಕಂತುಗಳ ಒಟ್ಟು 7,405.86 ಕೋಟಿ ರೂ. ಹಣ ಬಿಡುಗಡೆಯಾಗಿದ್ದು, ಸಿಎಂ ಡಿ.ಕೆ. ಶಿವಕುಮಾರ್ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ಕೆಲವರ ಖಾತೆಗೆ ಹಣ ತಲುಪದ ಹಾಗೂ ದುರ್ಬಳಕೆಯಾಗುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಮಹಿಳೆಯರು ತಮ್ಮದೇ ಸ್ವಂತ ಮೊಬೈಲ್ ಸಂಖ್ಯೆ ನಮೂದಿಸುವಂತೆ ಮನವಿ ಮಾಡಲಾಗಿದೆ.
ಮಹಿಳೆಯರು ಮೀಟರ್ ಬಡ್ಡಿ ಹಾಗೂ ಚೀಟಿ ವ್ಯವಹಾರಗಳ ಸುಳಿಗೆ ಸಿಲುಕದಂತೆ ಎಚ್ಚರಿಕೆ ನೀಡಿ, ಮುಂದಿನ ಅಧಿವೇಶನಕ್ಕೂ ಮುನ್ನ ಮಹಿಳಾ ಸಚಿವರ ನೇಮಕವಾಗಲಿದೆ ಎಂದರು.