
ಭಾರತದ ಜಿಡಿಪಿ ಶೇ. 7.8ರಷ್ಟು ಬೆಳವಣಿಗೆ ದಾಖಲಿಸುತ್ತಿದ್ದರೂ, ಜಾಗತಿಕ ಅನಿಶ್ಚಿತತೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೇಶವಾಸಿಗಳಿಗೆ ಮಿತವ್ಯಯದ ಸಲಹೆ ನೀಡಿದ್ದಾರೆ.
ವಿದೇಶಗಳಲ್ಲಿ ಮದುವೆ ಆಯೋಜಿಸುವುದು ಮತ್ತು ಅನಗತ್ಯವಾಗಿ ಚಿನ್ನ ಖರೀದಿಸುವುದನ್ನು ತಪ್ಪಿಸಿ, ದೇಶೀಯ ಉತ್ಪನ್ನಗಳಿಗೆ ಆದ್ಯತೆ ನೀಡುವಂತೆ ಅವರು ಮನವಿ ಮಾಡಿದ್ದಾರೆ.
ವಿದೇಶಿ ವಿನಿಮಯದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಮತ್ತು ದೇಶೀಯ ಪ್ರವಾಸೋದ್ಯಮ ಹಾಗೂ ಹೋಟೆಲ್ ಉದ್ಯಮವನ್ನು ಉತ್ತೇಜಿಸಲು ಈ ಕ್ರಮ ಅಗತ್ಯ ಎಂದು ಅವರು ತಿಳಿಸಿದ್ದಾರೆ.