
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಕ್ಷದ ಆಂತರಿಕ ಶಿಸ್ತು ಮತ್ತು ಮುಂಬರುವ ಚುನಾವಣೆಗಳ ಕುರಿತು ಶಾಸಕರಿಗೆ ಕಟ್ಟುನಿಟ್ಟಿನ ಮಾರ್ಗದರ್ಶನ ನೀಡಿದರು.
ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಡಿ ಸುಮಾರು 1 ಕೋಟಿ ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಆಗುವ ಆತಂಕವಿದ್ದು, ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ತಿದ್ದುಪಡಿಗೆ ಶಾಸಕರು ಸಕ್ರಿಯವಾಗಿ ಕೆಲಸ ಮಾಡಬೇಕೆಂದು ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಅವರು, ಸೀರಿಯಸ್ ಆಗಿ ಕೆಲಸ ಮಾಡದಿದ್ದರೆ ಶಾಸಕರಾಗಿ ಮುಂದುವರಿಯಲು ಆಸಕ್ತಿ ಇಲ್ಲ ಎಂದೇ ಅರ್ಥ ಎಂದು ಎಚ್ಚರಿಸಿದರಲ್ಲದೆ, ಜಾಗತಿಕ ಮಟ್ಟದ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಕಿವಿಮಾತು ಹೇಳಿದರು.