
ರಾಜ್ಯದ ಒಟ್ಟು 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಗಳು ಖಾಲಿ ಇವೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಸಚಿವರು, ಸದ್ಯ ಹೊಸ ಕಾಲೇಜುಗಳನ್ನು ತೆರೆಯುವ ಆಲೋಚನೆ ಇಲ್ಲ, ಬದಲಾಗಿ ಇರುವ ಕಾಲೇಜುಗಳ ಮೂಲಸೌಕರ್ಯ ಬಲವರ್ಧನೆಗೆ ಆದ್ಯತೆ ನೀಡಲಾಗುವುದು ಎಂದರು.
ದಾವಣಗೆರೆಯಲ್ಲಿ ಹೊಸ ಕಾಲೇಜು ತೆರೆಯುವ ಬೇಡಿಕೆಯನ್ನು ಪರಿಶೀಲಿಸಲಾಗುವುದು ಮತ್ತು ಅಲ್ಪಸಂಖ್ಯಾತ ಇಲಾಖೆಯ ಮೂಲಕ ಕಾಲೇಜು ತೆರೆಯುವ ಸಾಧ್ಯತೆಗಳನ್ನು ಚರ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.