
ಇಂಡೋನೇಷ್ಯಾದ ಮಧುರಾ ದ್ವೀಪದ ಕರಾವಳಿಯಲ್ಲಿ ಪ್ರಯಾಣಿಕರ ಹಡಗಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದು, 41ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಹಡಗಿನ ಇಂಜಿನ್ನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವೆಂದು ಶಂಕಿಸಲಾಗಿದ್ದು, ರಕ್ಷಣಾ ಪಡೆಗಳು ಹೆಲಿಕಾಪ್ಟರ್ ಮತ್ತು ಹೈ-ಸ್ಪೀಡ್ ಬೋಟ್ಗಳ ಮೂಲಕ ಶೋಧ ಕಾರ್ಯಾಚರಣೆ ನಡೆಸುತ್ತಿವೆ.
ಹಡಗಿನಲ್ಲಿ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರಿದ್ದರಿಂದ ದುರಂತದ ತೀವ್ರತೆ ಹೆಚ್ಚಾಗಿದ್ದು, ಸಮುದ್ರದ ಅಲೆಗಳ ಭೋರ್ಗರೆತ ರಕ್ಷಣಾ ಕಾರ್ಯಕ್ಕೆ ಸವಾಲಾಗಿ ಪರಿಣಮಿಸಿದೆ.