
ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ದಾಖಲಾಗಿದ್ದ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಮತ್ತು ನಲಪಾಡ್ ಅವರು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ಗೆ ಹಾಜರಾದರು.
ಎ.ತೇಜಸ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು, ಇಂದು ಆಗಸ್ಟ್ 29ರಂದು ಇಬ್ಬರಿಗೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಕೋರ್ಟ್ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ವಿಚಾರಣೆಗೆ ಖುದ್ದು ಹಾಜರಾಗಿದ್ದು, ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಗಳು ಮುಂದುವರಿಯಲಿವೆ.