
ಡುರಾಂಡ್ ಕಪ್ ಫುಟ್ಬಾಲ್ ಟೂರ್ನಿಯ ಕ್ವಾರ್ಟರ್ಫೈನಲ್ನಲ್ಲಿ ದೆಹಲಿ ತಂಡವು 5–1 ಗೋಲುಗಳಿಂದ ಎಫ್ಸಿ ರೆಂಗದೈ ತಂಡವನ್ನು ಸೋಲಿಸಿ ಸೆಮಿಫೈನಲ್ಗೆ ಪ್ರವೇಶಿಸಿದೆ.
ಮತ್ತೊಂದು ಪಂದ್ಯದಲ್ಲಿ ಈಸ್ಟ್ ಬೆಂಗಾಲ್ ತಂಡವು ಭಾರತೀಯ ಸೇನೆಯ ತಂಡವನ್ನು 1–0 ಗೋಲಿನಿಂದ ಮಣಿಸಿ ನಾಲ್ಕರ ಘಟ್ಟಕ್ಕೆ ಲಗ್ಗೆ ಇಟ್ಟಿದೆ.
ಸೆಮಿಫೈನಲ್ ಪಂದ್ಯವು ಬುಧವಾರ ಕೋಲ್ಕತ್ತದ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.