
ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಮೂರು ತಿಂಗಳಿಂದ ಅಗತ್ಯ ಔಷಧಿಗಳ ಕೊರತೆ ಉಂಟಾಗಿದ್ದು, ರೋಗಿಗಳು ತೀವ್ರ ಪರದಾಟ ನಡೆಸುತ್ತಿದ್ದಾರೆ.
ಆಸ್ಪತ್ರೆಯಲ್ಲಿ ಆ್ಯಂಟಿ ಬಯೋಟಿಕ್ ಮಾತ್ರೆಗಳು, ಇಂಜೆಕ್ಷನ್ಗಳು ಮತ್ತು ಮಕ್ಕಳ ಸಿರಪ್ಗಳ ಕೊರತೆ ಇದ್ದು, ವೈದ್ಯರು ಬರೆದುಕೊಟ್ಟ ಔಷಧಿಗಳು ಸಿಗುತ್ತಿಲ್ಲವೆಂದು ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಸ್. ನಿಲಗುಂದ ಅವರು ಸರ್ಕಾರಿ ಸ್ಟೋರ್ನಿಂದ ಪೂರೈಕೆ ಸಮಸ್ಯೆಯಾಗಿರುವುದನ್ನು ಒಪ್ಪಿಕೊಂಡಿದ್ದು, ಹೊರಗಿನಿಂದ ಔಷಧಿ ಖರೀದಿಸಿ ಪೂರೈಸಲಾಗುತ್ತಿದೆ ಎಂದು ತಿಳಿಸಿದ್ದಾರೆ.