Health & Environment
ಗದಗ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಗಳ ತೀವ್ರ ಕೊರತೆ

ಗದಗ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಗಳ ತೀವ್ರ ಕೊರತೆ

tv9kannada2h
THE BRIEF
1

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಮೂರು ತಿಂಗಳಿಂದ ಅಗತ್ಯ ಔಷಧಿಗಳ ಕೊರತೆ ಉಂಟಾಗಿದ್ದು, ರೋಗಿಗಳು ತೀವ್ರ ಪರದಾಟ ನಡೆಸುತ್ತಿದ್ದಾರೆ.

2

ಆಸ್ಪತ್ರೆಯಲ್ಲಿ ಆ್ಯಂಟಿ ಬಯೋಟಿಕ್ ಮಾತ್ರೆಗಳು, ಇಂಜೆಕ್ಷನ್‌ಗಳು ಮತ್ತು ಮಕ್ಕಳ ಸಿರಪ್‌ಗಳ ಕೊರತೆ ಇದ್ದು, ವೈದ್ಯರು ಬರೆದುಕೊಟ್ಟ ಔಷಧಿಗಳು ಸಿಗುತ್ತಿಲ್ಲವೆಂದು ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

3

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಸ್. ನಿಲಗುಂದ ಅವರು ಸರ್ಕಾರಿ ಸ್ಟೋರ್‌ನಿಂದ ಪೂರೈಕೆ ಸಮಸ್ಯೆಯಾಗಿರುವುದನ್ನು ಒಪ್ಪಿಕೊಂಡಿದ್ದು, ಹೊರಗಿನಿಂದ ಔಷಧಿ ಖರೀದಿಸಿ ಪೂರೈಸಲಾಗುತ್ತಿದೆ ಎಂದು ತಿಳಿಸಿದ್ದಾರೆ.