
ವೆಲ್ಲಿಂಗ್ಟನ್‌ನ ಸ್ಕೈ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ.
ಹವಾಮಾನ ವರದಿ ಪ್ರಕಾರ ಪಂದ್ಯದ ಆರಂಭಿಕ ಸಮಯ ಮಧ್ಯಾಹ್ನ 3ರಿಂದ 4 ಗಂಟೆಯ ಅವಧಿಯಲ್ಲಿ ಮಳೆಯಾಗುವ ಸಾಧ್ಯತೆ ಶೇ.60ರಷ್ಟಿದ್ದು, ಓವರ್‌ಗಳ ಕಡಿತದ ಆತಂಕವಿದೆ.
ಸರಣಿಯಲ್ಲಿ 2-0 ಮುನ್ನಡೆ ಸಾಧಿಸಲು ಭಾರತ ತಂಡ ಸಜ್ಜಾಗಿದ್ದು, ಈ ಮೈದಾನದಲ್ಲಿ ಭಾರತ ಇದುವರೆಗೆ ಆಡಿರುವ 4 ಪಂದ್ಯಗಳಲ್ಲಿ 2 ಜಯ ಮತ್ತು ಒಂದು ಸೋಲು ಕಂಡಿದೆ.