
ಅಕ್ಟೋಬರ್ 2ರ ಗಾಂಧಿ ಜಯಂತಿ ಹಾಗೂ ವಾರಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯು ಅಕ್ಟೋಬರ್ 1 ಮತ್ತು 2ರಂದು 850 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಿದೆ.
ಬೆಂಗಳೂರಿನ ಕೆಂಪೇಗೌಡ ಮತ್ತು ಮೈಸೂರು ರಸ್ತೆ ಬಸ್ ನಿಲ್ದಾಣಗಳಿಂದ ಧರ್ಮಸ್ಥಳ, ಮಂಗಳೂರು, ಹುಬ್ಬಳ್ಳಿ, ಶಿವಮೊಗ್ಗ ಹಾಗೂ ಮೈಸೂರು ಸೇರಿದಂತೆ ವಿವಿಧ ಸ್ಥಳಗಳಿಗೆ ಈ ಬಸ್‌ಗಳು ಸಂಚರಿಸಲಿವೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ಮತ್ತು ಎರಡು ಬದಿಯ ಟಿಕೆಟ್‌ಗೆ ಶೇ. 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.