
ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ವಿರುದ್ಧ 40,186 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದೆಹಲಿಯ ವಿಶೇಷ ನ್ಯಾಯಾಲಯಕ್ಕೆ ಎರಡು ಚಾರ್ಜ್ಶೀಟ್ಗಳನ್ನು ಸಲ್ಲಿಸಿದೆ.
ಅನಿಲ್ ಅಂಬಾನಿ ಒಡೆತನದ ಸಂಸ್ಥೆಗಳು ಬ್ಯಾಂಕ್ ಸಾಲ ಮತ್ತು ಎನ್ಎಚ್ಎಐ ಅನುದಾನದ ಹಣವನ್ನು ನಕಲಿ ದಾಖಲೆಗಳ ಮೂಲಕ ಬೇರೆಡೆಗೆ ವರ್ಗಾಯಿಸಿವೆ ಎಂದು ಇಡಿ ಆರೋಪಿಸಿದೆ.
ಈ ಪ್ರಕರಣದಲ್ಲಿ ಈಗಾಗಲೇ ಜಪ್ತಿ ಮಾಡಲಾಗಿರುವ 8,078 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿ ನ್ಯಾಯಾಲಯದ ಅನುಮತಿ ಕೋರಿದೆ.