
ಚುನಾವಣಾ ಆಯೋಗ, ಸುಪ್ರೀಂ ಕೋರ್ಟ್, ಸಿಬಿಐ ಹಾಗೂ ಇಡಿ ಸೇರಿದಂತೆ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಾಂಗ್ರೆಸ್ ನಾಯಕರು ಅನುಮಾನಪಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಗೆದ್ದರೆ ಚುನಾವಣಾ ಆಯೋಗ ದೇವರು, ಸೋತರೆ ವಿಲನ್ ಎಂಬ ಮನಸ್ಥಿತಿ ಹೊಂದಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಗೆದ್ದಿರುವ ಚುನಾವಣೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.
SIR ಕುರಿತು ಕಾನೂನು ಮಾನ್ಯತೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದರೂ ಕಾಂಗ್ರೆಸ್ ನಾಯಕರು ರಾಜಕೀಯ ಲಾಭಕ್ಕಾಗಿ ವಿರೋಧಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.