International
ಗಾಜಾದಲ್ಲಿ ಇಸ್ರೇಲ್ ದಾಳಿಗೆ ಬಲಿಯಾಗಿದ್ದ 112 ಮೃತದೇಹಗಳ ಸಾಮೂಹಿಕ ಅಂತ್ಯಸಂಸ್ಕಾರ

ಗಾಜಾದಲ್ಲಿ ಇಸ್ರೇಲ್ ದಾಳಿಗೆ ಬಲಿಯಾಗಿದ್ದ 112 ಮೃತದೇಹಗಳ ಸಾಮೂಹಿಕ ಅಂತ್ಯಸಂಸ್ಕಾರ

prajavani2h
THE BRIEF
1

ಗಾಜಾದ ಸಬ್ರಾ ನಗರದ ಮೇಲೆ 2023ರ ನವೆಂಬರ್‌ನಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದ 112 ಜನರ ಮೃತದೇಹಗಳ ಸಾಮೂಹಿಕ ಅಂತ್ಯಸಂಸ್ಕಾರ ಮಂಗಳವಾರ ನಡೆದಿದೆ.

2

ಇತ್ತೀಚೆಗೆ ಏರ್ಪಟ್ಟಿದ್ದ ಕದನ ವಿರಾಮದ ಅವಧಿಯಲ್ಲಿ ಅವಶೇಷಗಳ ಅಡಿಯಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ 40 ಮಕ್ಕಳು ಸೇರಿದಂತೆ ಒಟ್ಟು 112 ಮೃತದೇಹಗಳು ಪತ್ತೆಯಾಗಿವೆ ಎಂದು ಹಮಾಸ್ ಆಂತರಿಕ ಸಚಿವಾಲಯ ತಿಳಿಸಿದೆ.

3

ಈ ಭೀಕರ ದಾಳಿಯಲ್ಲಿ ಮೃತಪಟ್ಟ 300ಕ್ಕೂ ಹೆಚ್ಚು ಜನರ ಪೈಕಿ ಇನ್ನೂ 157 ಮಂದಿಯ ಮೃತದೇಹಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.