
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗದ ಕಾಮಗಾರಿ ಭರದಿಂದ ಸಾಗುತ್ತಿದ್ದು, 2027ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಈ ಯೋಜನೆ ಪೂರ್ಣಗೊಂಡರೆ ದಾವಣಗೆರೆಯಿಂದ ಬೆಂಗಳೂರಿಗೆ ರೈಲು ಸಂಪರ್ಕ ಮತ್ತಷ್ಟು ಸುಲಭವಾಗಲಿದ್ದು, ಪ್ರಯಾಣದ ಅವಧಿ ಸುಮಾರು ಎರಡೂವರೆ ಗಂಟೆಗಳಿಗೆ ಇಳಿಯುವ ನಿರೀಕ್ಷೆಯಿದೆ.
ಮುಂದೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ರೈಲು ನಿಲ್ದಾಣಗಳಲ್ಲಿ ಕನಿಷ್ಠ 21 ಬೋಗಿಗಳು ನಿಲ್ಲುವಂತೆ ಮೂಲಸೌಕರ್ಯ ವಿಸ್ತರಿಸಲಾಗುತ್ತಿದೆ.