
ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ₹2,000 ಮೊತ್ತವನ್ನು ಹಳೆಯ ಸಾಲದ ಕಂತು ಅಥವಾ ಬಡ್ಡಿಗೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್ಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.
ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿಗೆ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರು ಪತ್ರ ಬರೆದು ಆಟೋ ಡೆಬಿಟ್ಗೆ ನಿರ್ಬಂಧ ವಿಧಿಸಿದ್ದಾರೆ.
ಫಲಾನುಭವಿಗಳ ಲಿಖಿತ ಒಪ್ಪಿಗೆಯಿಲ್ಲದೆ ಸಾಲದ ಬಾಕಿಗೆ ಕಡಿತಗೊಳಿಸಿರುವ ಹಣವನ್ನು ತಕ್ಷಣವೇ ಆಯಾ ಮಹಿಳೆಯರ ಖಾತೆಗೆ ಮರುಜಮೆ ಮಾಡಲು ಸೂಚಿಸಲಾಗಿದೆ.