
ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಕ್ಸ್ ಶೃಂಗಸಭೆಯ ನಡುವೆ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರನ್ನು ಭೇಟಿ ಮಾಡಿ, ಉಭಯ ದೇಶಗಳ ಸಂಬಂಧ ವೃದ್ಧಿಗೆ ಗಡಿಯಲ್ಲಿ ಶಾಂತಿ ಅತ್ಯಗತ್ಯ ಎಂದು ಸ್ಪಷ್ಟಪಡಿಸಿದ್ದಾರೆ.
ಗಡಿ ನಿರ್ವಹಣೆ ಕುರಿತು ಜಾರಿಯಲ್ಲಿರುವ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಭಿನ್ನಾಭಿಪ್ರಾಯಗಳು ವಿವಾದಗಳಾಗಬಾರದು ಎಂದು ನಾಯಕರು ಪುನರುಚ್ಚರಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ವ್ಯಾಪಾರ ಅಸಮತೋಲನ ಪರಿಹರಿಸುವುದು ಮತ್ತು ಗಡಿ ವಿವಾದಕ್ಕೆ ನ್ಯಾಯಯುತ ಹಾಗೂ ಪರಸ್ಪರ ಸ್ವೀಕಾರಾರ್ಹ ಪರಿಹಾರ ಕಂಡುಕೊಳ್ಳುವ ಬದ್ಧತೆಯನ್ನು ನಾಯಕರು ವ್ಯಕ್ತಪಡಿಸಿದ್ದಾರೆ.