
ಧಾರವಾಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ನಟ ಪ್ರಕಾಶ್ ರಾಜ್ ಅವರಿಗೆ ಎಬಿವಿಪಿ ಮತ್ತು ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಲು ಯತ್ನಿಸಿದ್ದಾರೆ.
ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದು, ಈ ಕ್ರಮಕ್ಕೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮದ ಆಯೋಜಕರನ್ನು ಬಂಧಿಸದೆ ಕೇವಲ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರನ್ನು ಮಾತ್ರ ಬಂಧಿಸಿರುವುದು ಸರಿಯಲ್ಲ ಎಂದು ಶಾಸಕರು ಪೊಲೀಸ್ ಠಾಣೆಗೆ ತೆರಳಿ ತರಾಟೆ ತೆಗೆದುಕೊಂಡಿದ್ದಾರೆ.