
ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಅಂತಿಮ ಹಂತ ತಲುಪಿದೆ.
ಸೆಪ್ಟೆಂಬರ್ 1 ರಂದು ರಾಯಚೂರಿನ ಲಿಂಗಸುಗೂರಿನಿಂದ ಆರಂಭವಾದ ಈ ಪಾದಯಾತ್ರೆಯು ಸೋಮವಾರ ಸಂಡೂರಿನ ದರೋಜಿ ಗ್ರಾಮದಲ್ಲಿ ಅಂತ್ಯಗೊಂಡಿದ್ದು, ಇಂದು ಕುಡಿತಿನಿವರೆಗೆ ಮುಂದುವರಿಯಲಿದೆ.
ಸೆಪ್ಟೆಂಬರ್ 10 ರಂದು ಬಳ್ಳಾರಿಯಲ್ಲಿ ಬೃಹತ್ ಸಮಾರೋಪ ಸಮಾವೇಶ ನಡೆಯಲಿದ್ದು, ಇದರಲ್ಲಿ ಕೇಂದ್ರದ ಬಿಜೆಪಿ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.