
ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಕಂಪನಿಯ ಮಾಲೀಕ ಶಿವಾನಂದ ನೀಲಣ್ಣನವರ್ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ.
ಬೆಳಗಾವಿಯ ಮೂರು ಪ್ರಮುಖ ಸ್ಥಳಗಳಲ್ಲಿ ಮಂಗಳೂರು ಮತ್ತು ಗೋವಾದ ಇಡಿ ಅಧಿಕಾರಿಗಳ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಶಿವಾನಂದ ಮತ್ತು ಅವರ ಪತ್ನಿ ಸಂಗೀತಾರನ್ನು ವಿಚಾರಣೆಗೊಳಪಡಿಸಲಾಗಿದೆ.
ಈ ಹಿಂದೆ ಸಿಐಡಿ ತನಿಖೆಯಲ್ಲಿ 40,700ಕ್ಕೂ ಹೆಚ್ಚು ಹೂಡಿಕೆದಾರರಿಂದ 2,400 ಕೋಟಿ ರೂಪಾಯಿ ಸಂಗ್ರಹಿಸಿ ವಂಚಿಸಿರುವುದು ಬೆಳಕಿಗೆ ಬಂದಿದ್ದು, ಪ್ರಸ್ತುತ ಜಾಮೀನಿನ ಮೇಲೆ ಹೊರಗಿರುವ ಮಾಲೀಕನ ಹಣಕಾಸು ಅಕ್ರಮದ ಜಾಡು ಹಿಡಿದು ಇಡಿ ತನಿಖೆ ಆರಂಭಿಸಿದೆ.