
ಹೈದರಾಬಾದ್ನಲ್ಲಿ ನಿಲ್ಲಿಸಿದ್ದ ಮಹೀಂದ್ರಾ ಥಾರ್ ಸೇರಿದಂತೆ ವಿವಿಧ ಕಾರುಗಳ ಬಿಡಿ ಚಕ್ರಗಳನ್ನು ಕಳವು ಮಾಡುತ್ತಿದ್ದ 23 ವರ್ಷದ ಎಂಬಿಎ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಿಂದ ಒಟ್ಟು 15 ಚಕ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈತ ಪಂಕ್ಚರ್ ಅಂಗಡಿಯಿಂದ ಉಪಕರಣಗಳನ್ನು ಬಾಡಿಗೆಗೆ ತಂದು ಕೃತ್ಯ ಎಸಗುತ್ತಿರುವುದು ತನಿಖೆಯಿಂದ ತಿಳಿದುಬಂದಿದೆ.
ಹೈದರಾಬಾದ್ನ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 11 ಕಳ್ಳತನ ಪ್ರಕರಣಗಳಲ್ಲಿ ಈತನ ಕೈವಾಡವಿರುವುದು ಬೆಳಕಿಗೆ ಬಂದಿದೆ.