
ಮಲೆನಾಡಿನ ಜನರ ಬದುಕಿಗೆ ಧಕ್ಕೆ ತರುವ ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಲು ಅವಕಾಶ ನೀಡುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಏಳನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದ್ದು, ಇದರಲ್ಲಿ ತೀರ್ಥಹಳ್ಳಿಯ 154 ಗ್ರಾಮಗಳನ್ನು ಸೇರಿಸಲು ಪ್ರಯತ್ನಿಸುತ್ತಿರುವುದನ್ನು ಸರ್ಕಾರ ವಿರೋಧಿಸಿದೆ.
ತೀರ್ಥಹಳ್ಳಿಯಲ್ಲಿ ನಡೆದ ಬೃಹತ್ ಪಾದಯಾತ್ರೆಯಲ್ಲಿ ಭಾಗವಹಿಸಿದ ಸಚಿವರು, ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮವನ್ನು ಸರ್ಕಾರ ಒಪ್ಪುವುದಿಲ್ಲ ಎಂದು ಭರವಸೆ ನೀಡಿದ್ದಾರೆ.