
ಪಶ್ಚಿಮ ಬಂಗಾಳದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವುದಾಗಿ ಬೆಳಿಗ್ಗೆ ಘೋಷಿಸಿದ್ದರು.
ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದ ಬಳಿಕ ಅವರು ತಮ್ಮ ನಿರ್ಧಾರ ಬದಲಾಯಿಸಿದ್ದಾರೆ.
ತಾವು ಚುನಾವಣಾ ಕಣದಲ್ಲೇ 'ಫುಟ್ಬಾಲ್' ಚಿಹ್ನೆಯೊಂದಿಗೆ ಉಳಿಯುವುದಾಗಿ ರಬಿಯುಲ್ ಆಲಂ ಚೌಧರಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.