ಬೆಂಗಳೂರಿನ ಹುಸ್ಕೂರು ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಸೋಮವಾರ ಸಂಜೆ 5:50ರ ಸುಮಾರಿಗೆ ವ್ಯಕ್ತಿಯೊಬ್ಬರು ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಈ ಘಟನೆಯಿಂದಾಗಿ ಹಳದಿ ಮಾರ್ಗದ ಎಲೆಕ್ಟ್ರಾನಿಕ್ ಸಿಟಿ - ಬೊಮ್ಮಸಂದ್ರ ನಡುವಿನ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಆರ್ವಿ ರಸ್ತೆ - ಎಲೆಕ್ಟ್ರಾನಿಕ್ ಸಿಟಿ ನಡುವೆ ಮಾತ್ರ ರೈಲುಗಳು ಓಡುತ್ತಿವೆ.
ಬಿಎಂಆರ್ಸಿಎಲ್ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದು, ರೈಲು ಸೇವೆಯನ್ನು ಆದಷ್ಟು ಬೇಗ ಪುನರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.