
ಸಾಬರಮತಿ ಮತ್ತು ವೆರಾವಲ್ ನಡುವೆ ಸಂಚರಿಸುವ ವಂದೇ ಭಾರತ್ ರೈಲಿನಲ್ಲಿ ತುಕ್ಕು ಹಿಡಿದ ಶೌಚಾಲಯ ಹಾಗೂ ಕಳಪೆ ನಿರ್ವಹಣೆಯ ಫೋಟೋಗಳನ್ನು ಪ್ರಯಾಣಿಕರೊಬ್ಬರು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಈ ದೂರು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಅಹಮದಾಬಾದ್ ಡಿಆರ್ಎಂ ಸಿಬ್ಬಂದಿ ತಕ್ಷಣ ಸ್ಪಂದಿಸಿ ಆ ನಿರ್ದಿಷ್ಟ ಸ್ಥಳಗಳನ್ನು ಸ್ವಚ್ಛಗೊಳಿಸಿದ್ದಾರೆ.
ಸಾರ್ವಜನಿಕ ಆಸ್ತಿಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಸರ್ಕಾರದ ಜವಾಬ್ದಾರಿಯಷ್ಟೇ ಅಲ್ಲದೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.