
ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ತಮ್ಮ 83ನೇ ವಯಸ್ಸಿನಲ್ಲೂ ಸತತ 24 ಗಂಟೆಗಳ ಕಾಲ ವಿಶ್ರಾಂತಿಯಿಲ್ಲದೆ ಕೆಲಸ ಮಾಡಿ ತಮ್ಮ ವೃತ್ತಿಪರತೆಯನ್ನು ಮೆರೆದಿದ್ದಾರೆ.
ಅಮಿತಾಭ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಕ್ವಿಜ್ ಶೋ 'ಕೌನ್ ಬನೇಗಾ ಕರೋಡ್ಪತಿ ಸೀಸನ್ 18' ಆಗಸ್ಟ್ 10ರಿಂದ ಸೋನಿ ಎಂಟರ್ಟೇನ್ಮೆಂಟ್ ಟೆಲಿವಿಷನ್ ಮತ್ತು ಸೋನಿ ಲಿವ್ನಲ್ಲಿ ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ.
ಕೆಬಿಸಿ ಹೊರತಾಗಿ ಬಿಗ್ ಬಿ ಅವರು ನಾಗ್ ಅಶ್ವಿನ್ ನಿರ್ದೇಶನದ 'ಕಲ್ಕಿ 2898 AD' ಚಿತ್ರದ ಸೀಕ್ವೆಲ್ನಲ್ಲಿ ನಟಿಸುತ್ತಿದ್ದು, ಈ ಭಾಗದಿಂದ ದೀಪಿಕಾ ಪಡುಕೋಣೆ ಹೊರಗುಳಿದಿರುವುದನ್ನು ಚಿತ್ರತಂಡ ಖಚಿತಪಡಿಸಿದೆ.