
ಎನ್ಸಿಪಿ-ಎಸ್ಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಪುಣೆಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕೆಲವೇ ಗಂಟೆಗಳಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ವಾಸಕೋಶದ ಸಮಸ್ಯೆ ಹಾಗೂ ಪ್ಲುರಿಟಿಕ್ ಎದೆ ನೋವಿನ ಹಿನ್ನೆಲೆಯಲ್ಲಿ ಅವರನ್ನು ನವೆಂಬರ್ 2ರಂದು ಪುಣೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಪವಾರ್ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಮತ್ತು ನೀವು ವಿಶ್ರಾಂತಿ ಪಡೆಯಿರಿ ಎಂದು ಸಲಹೆ ನೀಡಿದ್ದಾರೆ.