Indian Politics
ದೇಶದ 8 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳ ನೇಮಕ

ದೇಶದ 8 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳ ನೇಮಕ

prajavani2h
THE BRIEF
1

ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ದೇಶದ 8 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

2

ವಲ್ಲೂರಿ ಕಾಮೇಶ್ವರ ರಾವ್ ಪಟ್ನಾ ಹೈಕೋರ್ಟ್‌ಗೆ, ಮಹೇಶ್ ಚಂದ್ರ ತ್ರಿಪಾಠಿ ಬಾಂಬೆ ಹೈಕೋರ್ಟ್‌ಗೆ ಹಾಗೂ ಅಶ್ವನಿ ಕುಮಾರ್ ಮಿಶ್ರಾ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

3

ಪುಷ್ಪೇಂದ್ರ ಸಿಂಗ್ ಭಾಟಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್‌ಗೆ, ಅಲ್ಪೇಶ್ ಯಶವಂತ್ ಕೊಗ್ಜೆ ಮಧ್ಯಪ್ರದೇಶ ಹೈಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.