
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳನ್ನು ಉಗುಳುವ ಚಾಲಕರು ಮತ್ತು ನಿರ್ವಾಹಕರಿಗೆ 200 ರೂ. ದಂಡ ವಿಧಿಸಲು ನಿರ್ಧರಿಸಿದೆ.
ಸಾರ್ವಜನಿಕರು ಬಸ್ ನಿಲ್ದಾಣ ಅಥವಾ ಬಸ್‌ನಲ್ಲಿ ಉಗುಳಿದರೆ 100 ರೂ. ದಂಡ ವಿಧಿಸಲಾಗುವುದು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಂಗಾ ಎಂ. ತಿಳಿಸಿದ್ದಾರೆ.
ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಈ ಹೊಸ ನಿಯಮ ಜಾರಿಗೆ ತರಲಾಗುತ್ತಿದ್ದು, ಮರು ಉಲ್ಲಂಘನೆ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಂಸ್ಥೆ ಚಿಂತನೆ ನಡೆಸಿದೆ.