
2026ರ ಏಷ್ಯನ್ ಕ್ರೀಡಾಕೂಟದ ಮಹಿಳಾ ಕ್ರಿಕೆಟ್ ಸ್ಪರ್ಧೆಯ ಸೆಮಿಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದ್ದು, ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಅರ್ಹತೆ ಪಡೆದಿವೆ.
ಸೆಪ್ಟೆಂಬರ್ 20 ರಂದು ನಡೆಯುವ ಮೊದಲ ಸೆಮಿಫೈನಲ್ನಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ ಮುಖಾಮುಖಿಯಾಗಲಿದ್ದು, ಭಾರತೀಯ ಕಾಲಮಾನ ಬೆಳಿಗ್ಗೆ 5:30ಕ್ಕೆ ಪಂದ್ಯ ಆರಂಭವಾಗಲಿದೆ.
ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ಸೆಪ್ಟೆಂಬರ್ 20ರಂದೇ ಬೆಳಿಗ್ಗೆ 10:30ಕ್ಕೆ ಎದುರುಬದುರಾಗಲಿವೆ.