
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳ ಸುದೀರ್ಘ ನಾಯಕತ್ವ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ವಿಶೇಷ ಅಭಿನಂದನಾ ನಿರ್ಣಯ ಅಂಗೀಕರಿಸಿದೆ.
2001ರ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದ ಮೋದಿ, ಅಲ್ಲಿಂದ ರಜೆರಹಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬಿಜೆಪಿಯು ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ದೇಶಾದ್ಯಂತ ಒಂದು ತಿಂಗಳ ಕಾಲ 'ಸೇವಾ ಸಂಕಲ್ಪ ಅಭಿಯಾನ' ಆಯೋಜಿಸುತ್ತಿದೆ.