
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಬಳಸಿ ವಿನೂತನ ಮಾದರಿಯಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ದೆಹಲಿ ಮೂಲದ ಅಮೀನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.
ಪ್ರಯಾಣಿಕರ ಬಳಿ ಪರ್ಸ್ ಕಳೆದುಹೋಗಿದೆ ಎಂದು ಸುಳ್ಳು ಹೇಳಿ ಕ್ಯೂಆರ್ ಕೋಡ್ ಮೂಲಕ ಹಣ ಹಾಕಿಸಿಕೊಂಡು ಈತ ಸಾವಿರಾರು ರೂಪಾಯಿಗಳನ್ನು ಸಂಗ್ರಹಿಸುತ್ತಿದ್ದ.
ವಿಮಾನ ನಿಲ್ದಾಣ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮುಂಬೈ ಸೇರಿದಂತೆ ಇತರೆ ಏರ್ಪೋರ್ಟ್ಗಳಲ್ಲೂ ಈ ದಂಧೆ ನಡೆಯುತ್ತಿರುವುದು ತಿಳಿದುಬಂದಿದ್ದು, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.