
ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಸಂಜಯ್ ಕೌಲ್ ಅವರ ಬಿಡುಗಡೆಯಾಗದ ಆತ್ಮಚರಿತ್ರೆಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ವಾಗ್ದಾಳಿ ನಡೆಸಿದೆ.
ನ್ಯಾಯಮೂರ್ತಿ ಕೌಲ್ ಅವರು ನ್ಯಾಯಾಂಗ ನೇಮಕಾತಿಯಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಎತ್ತಿ ತೋರಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ದೇಶದ ನ್ಯಾಯಾಂಗ ವ್ಯವಸ್ಥೆಯು ಅಧಿಕಾರದಲ್ಲಿರುವವರ ಒತ್ತಡಗಳಿಂದ ಸಂಪೂರ್ಣ ಮುಕ್ತವಾಗಿರಬೇಕು ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.