
ಆನೇಕಲ್ ತಾಲೂಕಿನ ಬಿಲ್ವಾರದಹಳ್ಳಿ ಗ್ರಾಮದಲ್ಲಿ ಆಗಸ್ಟ್ 4ರಂದು ಸುರಿದ ಭಾರಿ ಮಳೆಗೆ ಖಾಸಗಿ ಶಾಲೆಯ ಗೋಡೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ.
ಮುಂಜಾಗ್ರತಾ ಕ್ರಮವಾಗಿ ಕುಸಿದ ಗೋಡೆಯ ಪಕ್ಕದ ಕಟ್ಟಡದಲ್ಲಿದ್ದ ಎರಡು ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಸಾರ್ವಜನಿಕರ ಓಡಾಟವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶಾಲೆಗೆ ರಜೆ ಘೋಷಿಸಲಾಗಿದ್ದು, ಇಂಜಿನಿಯರ್ಗಳ ಪರಿಶೀಲನೆಯ ನಂತರವಷ್ಟೇ ಶಾಲೆ ಪುನಾರಂಭಿಸಲು ಸೂಚನೆ ನೀಡಲಾಗಿದೆ.