
ಪಶ್ಚಿಮ ಘಟ್ಟದ 10 ಜಿಲ್ಲೆಗಳ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಘೋಷಿಸುವ ಕೇಂದ್ರದ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಬಲವಾಗಿ ವಿರೋಧಿಸಿದೆ.
ಈ ವರದಿ ಜಾರಿಯಿಂದ ಲಕ್ಷಾಂತರ ಕುಟುಂಬಗಳಿಗೆ ತೊಂದರೆಯಾಗಲಿದ್ದು, ಇದನ್ನು ತಡೆಯಲು ಸರ್ಕಾರ ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಿದೆ ಎಂದು ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದು, ಜನರ ಹಿತದೃಷ್ಟಿಯಿಂದ ಈ ವರದಿಯನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.