
ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಗೆಲುವು ಸಿಕ್ಕ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಯಡಿಯೂರಪ್ಪ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಈ ಭೇಟಿಯ ಸಂದರ್ಭದಲ್ಲಿ ಶಾಸಕರಾದ ಸಿ.ಕೆ.ರಾಮಮೂರ್ತಿ ಮತ್ತು ಎಂ.ಕೃಷ್ಣಪ್ಪ ಉಪಸ್ಥಿತರಿದ್ದರು.