
ಸಿಬ್ಬಂದಿ ಆಯ್ಕೆ ಆಯೋಗವು (SSC) ವಿವಿಧ ಇಲಾಖೆಗಳಲ್ಲಿನ 1,748 ಜೂನಿಯರ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ssc.gov.in ವೆಬ್ಸೈಟ್ ಮೂಲಕ ಸೆಪ್ಟೆಂಬರ್ 22ರೊಳಗೆ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35,400 ರಿಂದ 1,12,400 ರೂಪಾಯಿ ವೇತನ ಶ್ರೇಣಿ ನಿಗದಿಪಡಿಸಲಾಗಿದ್ದು, ಎಂಜಿನಿಯರಿಂಗ್ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಕಡ್ಡಾಯವಾಗಿದೆ.
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವಿದ್ದು, ಮಹಿಳೆಯರು, ಎಸ್ಸಿ, ಎಸ್ಟಿ ಮತ್ತು ಮಾಜಿ ಸೈನಿಕರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.