
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಮೊಬೈಲ್ ಫೋನ್ ವಿಚಾರದ ಕೌಟುಂಬಿಕ ಕಲಹದಿಂದಾಗಿ 19 ವರ್ಷದ ಯುವಕ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಆಗಸ್ಟ್ 21 ರಂದು ಮಧ್ಯಾಹ್ನ 19 ವರ್ಷದ ಯುವಕ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ ತಂದೆ ಮುರಳೀಧರ್ ಮತ್ತು ತಾಯಿ ಸಂಗೀತಾ ಕೂಡ ಬಿದ್ದು ಮೃತಪಟ್ಟಿದ್ದಾರೆ.
ವಾಲುಜ್ ಪೊಲೀಸ್ ಠಾಣೆ ವ್ಯಾಪ್ತಿಯ ಟಿಸ್ಗಾಂವ್ ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ ಮೃತಪಟ್ಟ ಮೂವರೂ ತೀವ್ರವಾದ ಪಾಲಿಟ್ರಾಮಾ ಮತ್ತು ಆಂತರಿಕ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ದೃಢಪಡಿಸಿದೆ.