
ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಸೂರ್ಯಕಾಂತಿ ತೋಟದಲ್ಲಿ ಹುಲಿಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಸ್ಯಾಂಪಲ್ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಐದು ಹುಲಿಗಳು ವಿಷಪೂರಿತ ಮಾಂಸ ತಿಂದು ಮೃತಪಟ್ಟಿದ್ದ ಘಟನೆ ನಡೆದಿದ್ದು, ಈ ಪ್ರಕರಣದ ತನಿಖೆ ಮುಂದುವರಿದಿದೆ.