
ಕನಾಟ್ ಪ್ಲೇಸ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ ಅರೆಸೇನಾ ಸಿಬ್ಬಂದಿ ಬಲವಂತವಾಗಿ ಬಸ್‌ನೊಳಗೆ ತಳ್ಳಿದರು ಎಂದು ಸಿಪಿಎಂ ಸಂಸದ ಜಾನ್ ಬ್ರಿಟ್ಟಾಸ್ ಆರೋಪಿಸಿದ್ದಾರೆ.
ಬಸ್‌ನಲ್ಲಿ ಕೆಲವರು ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಹಲ್ಲೆ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸರ ದರ್ಪದ ವಿರುದ್ಧ ರಾಷ್ಟ್ರಪತಿ ಹಾಗೂ ಮುಖ್ಯ ನ್ಯಾಯಮೂರ್ತಿ ಅವರಿಗೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದ್ದಾರೆ.