
ಗೌರಿ-ಗಣೇಶ ಹಬ್ಬದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುವ ಖಾಸಗಿ ಬಸ್ ಮಾಲೀಕರ ವಿರುದ್ಧ ಸಾರಿಗೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.
ಸೆಪ್ಟೆಂಬರ್ 11 ರಿಂದ 15 ರವರೆಗೆ ರಾಜ್ಯಾದ್ಯಂತ ಹಗಲು-ರಾತ್ರಿ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲು ಜಂಟಿ ಸಾರಿಗೆ ಆಯುಕ್ತರಿಗೆ ಸೂಚಿಸಲಾಗಿದೆ.
ನಿಯಮ ಮೀರಿ ದರ ಏರಿಕೆ ಮಾಡುವ ಬಸ್ಸುಗಳಿಗೆ ದಂಡ ವಿಧಿಸುವುದಲ್ಲದೆ, ವಾಹನಗಳನ್ನು ಜಪ್ತಿ ಮಾಡುವ ಎಚ್ಚರಿಕೆಯನ್ನು ಇಲಾಖೆ ನೀಡಿದೆ.